ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪಘಾತ: 2 ಮಕ್ಕಳು ಮೃತ್ಯು, 5 ಮಂದಿ ಗಂಭೀರ ಗಾಯ

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ.
ನೀಲೇಶ್ವರ ಕಣಿಚ್ಚರದ ಝಯೀನ್ ರೆಹಮಾನ್ (5) ಮತ್ತು ಲಹಾಬ್ ಜೈನಬಾ (12) ಮೃತ ಪಟ್ಟವರು. ಘಟನೆಯಲ್ಲಿ ಝುಹರಾ (40), ಶೆರಿನ್ (15) ಗಂಭೀರ ಗಾಯಗೊಂಡಿದ್ದಾರೆ. ಕಾರು ಚಾಲಕ ಫಾಯಿಜ್, ಬಸ್ಸು ಪ್ರಯಾಣಿಕರಾದ ಸೂರ್ಯ, ಅನಿಲ್ ಗಾಯಗೊಂಡಿದ್ದಾರೆ. ಕಣ್ಣೂರು ಕಡೆಗೆ ತೆರಳುತ್ತಿದ್ದ ಮತ್ತು ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ನಡುವೆ ಈ ಅಪಘಾತ ನಡೆದಿದೆ.
ಅಪಘಾತದಿಂದ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಆಗಮಿಸಿ ನಜ್ಜು ಗುಜ್ಜಾಗಿದ್ದ ಕಾರಿನಲ್ಲಿದ್ದವರನ್ನು ಹೊರತೆಗೆದರೂ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು.
ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಕಾಞಂಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.