ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿ ಯುವಕ ಆತ್ಮಹತ್ಯೆ

ಮಂಡ್ಯ: ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಯುವಕನ ಹೊಟ್ಟೆ ಭಾಗ ಛಿದ್ರವಾಗಿದೆ.
ರಾಮಚಂದ್ರ ಒಂದು ವರ್ಷದ ಹಿಂದೆ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದ. ಈ ಹಿನ್ನೆಲೆ ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಬಳಿಕ 6 ತಿಂಗಳು ಜೈಲುವಾಸ ಅನುಭವಿಸಿದ್ದ.
ಬಳಿಕ 2 ಕುಟುಂಬಗಳ ರಾಜಿ ಸಂಧಾನದ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ರಾಮಚಂದ್ರನ ಸಂಪರ್ಕಕ್ಕೆ ಬಾಲಕಿ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಆಕೆಯ ಮುನೆಯ ಮುಂದೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.