March 19, 2026

ತನ್ನ ಮನೆಯಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡಿದ ಕರೀಂಸಾಬ್

0
image_editor_output_image1163316133-1735542324081.jpg

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಕಳೆದ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ ಮಾಡುತ್ತಾ ಹಿಂದೂ ಮುಸ್ಲಿಮರ ನಡುವಿನ ಭಾವೈಕ್ಯತೆ ಸಾರಿದ್ದಾರೆ. ಕವಿತಾಳ ಮತ್ತು ಪಾತಾಪೂರದ ಅಯ್ಯಪ್ಪ ಸ್ವಾಮಿ ಪೀಠದ 40ಕ್ಕೂ ಹೆಚ್ಚು ಮಾಲಾಧಾರಿಗಳಿಗೆ ಹೋಳಿಗೆ ತುಪ್ಪ, ಲಾಡು ಸೇರಿ ಬಗೆಬಗೆಯ ತಿಂಡಿ ತಿನಿಸುಗಳನ್ನು ಮಾಡಿ ಸ್ವತಃ ಬಡಿಸುವ ಮೂಲಕ ಗಮನ ಸೆಳೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!