March 19, 2026

ಸಿಲಿಂಡರ್ ಬ್ಲಾಸ್ಟ್ ಪ್ರಕರಣ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು: 8ಕ್ಕೇರಿದ ಸಾವಿನ ಸಂಖ್ಯೆ

0
image_editor_output_image-209025024-1735620608822.jpg

ಹುಬ್ಬಳ್ಳಿ: ಹುಬ್ಬಳ್ಳಿಯ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ.

ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.

ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27) ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಕಿಮ್ಸ್ನಲ್ಲಿ ಓರ್ವ ಗಾಯಾಳು ಮಾಲಾಧಾರಿಗೆ ಚಿಕಿತ್ಸೆ ಮುಂದುವರಿದಿದೆ.

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ.

ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಅಯ್ಯಪ್ಪನ ಆಶೀರ್ವಾದದಿಂದ ಮಗ ಬದುಕಿ ಬರಬಹುದು ಎಂದುಕೊಂಡಿದ್ದ ಕುಟುಂಬಕ್ಕೆ ಸಾವಿನ ಸುದ್ದಿಯಿಂದ ಆಕಾಶಾವೇ ತಲೆ ಮೇಲೆ ಕಳಚಿ ಬಿದ್ದಂತಾಗಿದೆ.

Leave a Reply

Your email address will not be published. Required fields are marked *

error: Content is protected !!