ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್: ವಿದ್ಯಾರ್ಥಿನಿಯರ ಶೈಕ್ಷಣಿಕ, ಪ್ರತಿಭಾ ಸಾಧನೆಗಾಗಿ ಅಭಿನಂದನೆ

ಪುತ್ತೂರು: ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಶರೀಅತ್ ಕಾಲೇಜ್ ವಿದ್ಯಾರ್ಥಿನಿಯರ ಶೈಕ್ಷಣಿಕ ಮತ್ತು ಪ್ರತಿಭಾ ಸಾಧನೆಗಾಗಿ ಕಾಲೇಜ್ ನ ಅಲುಮ್ನಿ ಗ್ರೂಪ್ ‘ಝುಮ್ರತುಸ್ವಾಲಿಹಾತ್’ ವತಿಯಿಂದ ಕ್ಯಾಶ್ ಅವಾರ್ಡ್ ಮತ್ತು ಸ್ಮರಣಿಕೆಯನ್ನು ನೀಡಿ ಅಭಿನಂದಿಸಲಾಯಿತು.
ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು ಕ್ಯಾಶ್ ಅವಾರ್ಡ್ ಮತ್ತು ಸ್ಮರಣಿಕೆಯನ್ನು ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ ಅವರಿಗೆ ಹಸ್ತಾಂತರಿಸಿದರು.
ಈ ಸಮಾರಂಭದಲ್ಲಿ ಪುತ್ತೂರು ಪ್ರಸಾದ್ ಇಂಡಸ್ಟೀಟ್ ನ ಶಿವ ಪ್ರಸಾದ್ ಶೆಟ್ಟಿ, ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್, ಸಂಚಾಲಕ ಮುಹಮ್ಮದ್ ಸಾಬ್ ಹಾಜಿ, ಟ್ರಸ್ಟಿ ಎಲ್.ಟಿ ಅಬ್ದುಲ್ ರಝಾಕ್ ಹಾಜಿ, ಮುಹಮ್ಮದ್ ಬಡಗನ್ನೂರು, ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ, ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ಅಬ್ದುಲ್ ರವೂಫ್ ಕಾರ್ಯಕ್ರಮ ನಿರ್ವಹಿಸಿದರು.