ಯುವಕನಿಗೆ ಚಾಕುವಿನಿಂದ ಇರಿದ ಯುವತಿ

ಹಾಸನ: ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಜಗಳ ಮಾಡಿ, ಏಕಾಏಕಿ ಚಾಕು ಇರಿದ ಘಟನೆ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ ನಡೆದಿದೆ.
ಚಾಕು ಇರಿತಕ್ಕೊಳಗಾದ ಯುವಕನನ್ನು ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ (25) ಎಂದು ಗುರುತಿಸಲಾಗಿದೆ. ಚಾಕು ಇರಿದ ಯುವತಿಯನ್ನು ಭವಾನಿ ಎಂದು ಗುರುತಿಸಲಾಗಿದೆ. ಇಬ್ಬರೂ ಒಂದೇ ಗ್ರಾಮದವರಾಗಿದ್ದಾರೆ. ಮನುಕುಮಾರ್ ಹಾಗೂ ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು, ಕೆಲ ದಿನಗಳಿಂದ ಇಬ್ಬರು ದೂರವಾಗಿದ್ದರು ಎಂದು ತಿಳಿದು ಬಂದಿದೆ.