November 13, 2026

ತುಮಕೂರು: ದೂರು ಕೊಡಲು ಬಂದ ಮಹಿಳೆ ಮೇಲೆ ಡಿವೈಎಸಪಿ ಲೈಂಗಿಕ ದೌರ್ಜನ್ಯ: ವಿಡಿಯೋ ವೈರಲ್

0
image_editor_output_image728044542-1735884794331.jpg

ತುಮಕೂರು: ದೂರು ನೀಡಲು ಬಂದ ಮಹಿಳೆ ಮೇಲೆ ಡಿವೈಎಸ್ ಪಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ನಡೆದಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್ ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!