ಕಡಬ: ಕೊಂಬಾರು ಗ್ರಾ.ಪಂ. ನಲ್ಲಿ ಕಾನೂನು ಅರಿವು – ನೆರವು ಕಾರ್ಯಕ್ರಮ.
ಕಡಬ: ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರೋಜ್ ಗಾರ್ ದಿನಾಚರಣೆ ಮತ್ತು ಕಾನೂನು ಮಾಹಿತಿ ಶಿಬಿರ ಅ.22 ರಂದು ಕೊಂಬಾರು ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.
ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಮತ್ತು ವಕೀಲರ ಸಂಘ ಪುತ್ತೂರು ಇದರ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾನೂನು ಅರಿವು – ನೆರವು ಮತ್ತು ಮಹಿಳಾ ದೌರ್ಜನ್ಯ ಮುಕ್ತಿ ತಡೆ ಕಾಯಿದೆಯ ಬಗ್ಗೆ ಸಂಪನ್ಮೂಲ ವ್ಯಕ್ತಿ ಅಡ್ವಕೇಟ್ ಜುಬೇದಾ ಸರಳಿಕಟ್ಟೆ ಅವರು ಮಹಿಳೆಯರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಶಿವಪ್ರಸಾದ್, ಉಪಾಧ್ಯಕ್ಷೆ ಸರಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಮತ್ತು ಅಂಗನವಾಡಿ ಮೇಲ್ವಿಚಾರಕಿ ವನಿತಾ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಜಯಶ್ರೀ, ಗ್ರಾ.ಪಂ. ಸದಸ್ಯೆ ವೀಣಾ, ಸಂಜೀವಿನಿ ಒಕ್ಕೂಟದ ಎಂಬಿಕೆ ಮತ್ತು ಎಲ್ಸಿಆರ್ಪಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.






