March 15, 2025

ದೂರು ನೀಡಲು ಬಂದ ಮಹಿಳೆ ಜತೆ ಅಸಭ್ಯ ವರ್ತನೆ: ಡಿವೈಎಸ್‌ಪಿ ರಾಮಚಂದ್ರಪ್ಪ ಬಂಧನ

0

ತುಮಕೂರು: ಕಚೇರಿಯಲ್ಲೇ ಮಹಿಳೆ ಜೊತೆ ಆಸಭ್ಯವಾಗಿ ವರ್ತಿಸಿದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ.

ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗಿದೆ. ತಕ್ಷಣ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಸನ್ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ.

 

 

ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಡಿವೈಎಸ್‌ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿರುತ್ತಾರೆ.

ಬಳಿಕ ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಆಸಭ್ಯವಾಗಿ ವರ್ತಿಸಿದ್ದಾರೆ.

ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.

ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!