ಮಂಗಳೂರಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಅನಾರೋಗ್ಯದಿಂದ ಮೃತ್ಯು

ಹೆಬ್ರಿ: ಹೆಬ್ರಿಯ ಖ್ಯಾತ ಭಾಗವತ ಗಣೇಶ ಹೆಬ್ರಿ ಅವರ ಪುತ್ರ ಅಮೃತ ರಾಜ್ (21) ಜ. 3ರಂದು ನಿಧನ ಹೊಂದಿದರು.
ಮಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಫಿಜಿಯೋಥೆರಪಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದವರು ಅನಾರೋಗ್ಯ ನಿಮಿತ್ತ ಕಲಿಕೆಯನ್ನು ಮೊಟಕುಗೊಳಿಸಿದ್ದರು. ಅನಂತರ ಅನಾರೋಗ್ಯ ಉಲ್ಬಣಗೊಂಡು ಚಿಕಿತ್ಸೆ ಪಡೆಯುತ್ತಿದ್ದವರು ಮೃತಪಟ್ಟಿದ್ದಾರೆ. ಅವರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಅಗಲಿದ ಮಗನ ದೇಹವನ್ನು ಭಾಗವತ ಗಣೇಶ ಅವರು ವೈದ್ಯಕೀಯ ಶಿಕ್ಷಣಕ್ಕೆ ಕೆಎಂಸಿ ಆಸ್ಪತ್ರೆಗೆ ದಾನ ಮಾಡಿದ್ದಾರೆ.