ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ದಕ್ಷಿಣ ಉಪವಿಭಾಗದ ಮಾದಕ ದ್ರವ್ಯ ನಿಗ್ರಹ ತಂಡ ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ಸಿಯಾಗಿದೆ.
ಆರೋಪಿಗಳು ಮೂಡ ಗ್ರಾಮದ ಮೊಹಮ್ಮದ್ ಅಸಿಫ್ (34), ನಿಯಾಜ್(40) ಎಂದು ಗುರುತಿಸಲಾಗಿದೆ.
ಮಂಗಳೂರು ಗ್ರಾಮಾಂತರ ಪೊಲೀಸ್ ರಾಣಾ ವ್ಯಾಪ್ತಿಯ ಪಿಲಿಕುಳದ ಬಳಿಯಿರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್ ಬಳಿ ಆರೋಪಿಗಳು ಅಕ್ರಮವಾಗಿ ಗಾಂಜಾ ತಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿತರಿಂದ ಸುಮಾರು ೯೫೮ ಗ್ರಾಂ ಗಾಂಜಾ, ಮೊಬೈಲ್ ಫೋನ್ ಸ್ವಾಧೀನ ಪಡಿಸಿಲಾಗಿದೆ.




