ರಸ್ತೆ ಮಧ್ಯದಲ್ಲೆ ಲಾಂಗ್‌ನಿಂದ ಕೊಚ್ಚಿ ಜೆಡಿಎಸ್ ಮುಖಂಡನ ಬರ್ಬರ ಕೊಲೆ
ಚಿಕ್ಕಬಳ್ಳಾಪುರ: ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ಅಪ್ಪಟ ಅಭಿಮಾನಿ ಹಾಗೂ ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಎಂದಿನಂತೆ ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಗೆ ತೆರಳುತ್ತಿದ್ದರು.
ಈ ವೇಳೆ ಸಂಚು ರೂಪಿಸಿ, ಮನೆಯತ್ತ ಸ್ಕೂಟಿ ಮೂಲಕ ಹೊರಟಿದ್ದ ವೆಂಕಟೇಶ್ ಅವರಿಗೆ ಅಡ್ಡ ಬಂದು ಲಾಂಗ್‌ನಿಂದ ಬಲವಾಗಿ ಬೀಸಲಾಗಿದೆ. ಪರಿಣಾಮ ಎಡಗೈ ತೋಳಿನ ಭಾಗ ಕಟ್ ಆಗಿ, ಗಾಡಿ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಮನಸ್ಸೋ ಇಚ್ಛೆ ಮುಖಕ್ಕೆ ಲಾಂಗ್ ನಿಂದ ಕೊಚ್ಚಲಾಗಿದೆ. ಹೊಟ್ಟೆಯ ಭಾಗಕ್ಕೆ ಬಲವಾಗಿ ಬೀಸಲಾಗಿದೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.




