January 31, 2026

ಮಣಿಪಾಲ: ಅರ್ಪಾಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ, ಮಹಿಳೆ ಸಹಿತ ಇಬ್ಬರನ್ನು ಬಂಧನ

0
image_editor_output_image-929166699-1736145263984.jpg

ಮಣಿಪಾಲ: ಪೆರಂಪಳ್ಳಿಯ ಅರ್ಪಾಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ್ದು, ಓರ್ವ ಮಹಿಳೆಯನ್ನು ರಕ್ಷಿಸಿ, ಪ್ರಮುಖ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಶನಿವಾರ ಪೆರಂಪಳ್ಳಿಯ ಅರ್ಪಾಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿನ್ವಯ ದಾಳಿ ನಡೆಸಿದ ಮಣಿಪಾಲ ಠಾಣೆಯ ಪಿ.ಐ ದೇವರಾಜ್ ಟಿ.ವಿ ನೇತೃತ್ವದಲ್ಲಿ ಪಿಎಸ್‌ಐ ಅನೀಲ್, ಎಎಸ್‌ಐ ವಿವೇಕ್ ಹಾಗೂ ಸಿಬ್ಬಂದಿಗಳಾದ ವಿದ್ಯಾ, ಇಮ್ರಾನ್, ಪ್ರಸನ್, ಮಂಜುನಾಥ ರವರನ್ನೊಳಗೊಂಡ ತಂಡ ದಾಳಿ ಮಾಡಿ ರಘುನಂದನ್(40) ಕೊಪ್ಪ ಚಿಕ್ಕಮಗಳೂರು ಜಿಲ್ಲೆ ಹಾಗೂ ಅಮೀನಾ ಬೇಗಂ (55) ಹರಿಹರ, ದಾವರಣಗೆರೆ ಜಿಲ್ಲೆ ಇವರನ್ನು ಬಂಧಿಸಿದ್ದಾರೆ.

ಆರೋಪಿಗಳು ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಬೆಂಗಳೂರು ಮೂಲದ ಓರ್ವ ಮಹಿಳೆಯನ್ನು ರಕ್ಷಿಸಲಾಯಿತು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!