March 18, 2026

ಹೆಬ್ರಿ| ಬೈಕ್ ಗೆ ಕಾರು ಢಿಕ್ಕಿ: ಬೈಕ್ ಸವಾರ, RSS ಪ್ರಮುಖ್ ರಾಹುಲ್‌ ಸಾವು

0
image_editor_output_image1819067616-1736145744796.jpg

ಹೆಬ್ರಿ: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ.

ಶಿವಪುರ ಗ್ರಾಮದ ರಾಂ ಪುರ ಎನ್ನುವಲ್ಲಿ ಜನವರಿ 4ರ ರಾತ್ರಿ ಸುಮಾರು 11.30ರ ಹೊತ್ತಿಗೆ ಹೆಬ್ರಿ ಕಡೆ ಬರುತ್ತಿದ್ದ ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು, ಪರಿಣಾಮ ಶಿವಪುರ ಮೂರ್ಸಾಲು ನಿವಾಸಿ ರಾಹುಲ್‌ (25) ಮೃತಪಟ್ಟಿದ್ದಾರೆ.

ಎದುರುಗಡೆಯಿಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್‌ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ ಬಲಭಾಗಕ್ಕೆ ಚಲಾಯಿಸಿಕೊಂಡು ಬಂದು ಮೋಟಾರು ಸೈಕಲ್‌ಗೆ ಎದುರಿನಿಂದ ಢಿಕ್ಕಿ ಹೊಡೆದಿತ್ತು. ಪರಿಣಾಮ ಮೋಟಾರ್‌ ಸೈಕಲ್‌ ಸವಾರ ರಸ್ತೆಗೆ ಬಿದ್ದಿದ್ದು, ಅವರಿಗೆ ತೀವ್ರ ಸ್ವರೂಪದ ಗಾಯವಾಗಿತ್ತು

Leave a Reply

Your email address will not be published. Required fields are marked *

error: Content is protected !!