March 18, 2026

ಬಸ್‌ ನಿಲ್ದಾಣ, ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ: ನಾಲ್ವರು ಆರೋಪಿಗಳ ಬಂಧನ

0
image_editor_output_image246237981-1736153096918.jpg

ಸಿದ್ದಾಪುರ: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ಕೇರಿ ಬಸ್‌ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಕ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ (24) ವರ್ಷ, ಇಮ್ಮಿಯಾಜ್ ಆಲಿ (20) ರೋಹಿಥಾನ್ (50) ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ (32) ಬಂಧಿತ ಆರೋಪಿಗಳು. ಇವರ ಬಳಯಿಂದ 2 ಕೆ.ಜಿ 481 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು.

Leave a Reply

Your email address will not be published. Required fields are marked *

error: Content is protected !!