March 18, 2026

ಕೊಣಾಜೆ: ಟಿಪ್ಪರ್ ಲಾರಿ, ಬೈಕ್ ನಡುವೆ ಅಪಘಾತ: ದೇರಳಕಟ್ಟೆ ನಿವಾಸಿ, ಯುವಕ ಅನ್ಸಾಫ್ ಮೃತ್ಯು

0
image_editor_output_image-1334251757-1736171245068.jpg

ಕೊಣಾಜೆ: ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿರುವುದಾಗಿ ವರದಿ ಆಗಿದೆ.

ಮೃತ ಬೈಕ್‌ ಸವಾರನನ್ನು ದೇರಳಕಟ್ಟೆ ನಿವಾಸಿ ಜಲೀಲ್ ಮೆಡಿಕಲ್ ಎಂಬವರ ಪುತ್ರ ಅನ್ಸಾಫ್ (25) ಎಂದು ಗುರುತಿಸಲಾಗಿದೆ. ತಿಪ್ಲಪದವು ಗ್ಯಾರೇಜ್ ಬಳಿಯಿಂದ ರಸ್ತೆಯಲ್ಲಿ ಲಾರಿ ಯುಟರ್ನ್ ಹೊಡೆಯುತ್ತಿದ್ದಾಗ ಅಸೈಗೋಳಿ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!