ಕೆನಡಾ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಜಸ್ಟಿನ್ ಟ್ರೂಡೊ

ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2013ರಿಂದ ಕೆನಡಾದ ಲಿಬರಲ್ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ.
ಪಕ್ಷವು ಹೊಸ ನಾಯಕನನ್ನು ಆಯ್ಕೆ ಮಾಡಿದ ನಂತರ ನಾನು ಪಕ್ಷದ ನಾಯಕನ ಸ್ಥಾನಕ್ಕೆ ಮತ್ತು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ” ಎಂದು ಜಸ್ಟಿನ್ ಟ್ರುಡೊ ಒಟ್ಟಾವಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಜಸ್ಟಿನ್ ಟ್ರುಡೊ ಇತ್ತೀಚೆಗೆ ತನ್ನದೇ ಪಕ್ಷದಲ್ಲಿ ವಿರೋಧವನ್ನು ಎದುರಿಸಿದ್ದರು. ಉತ್ತರಾಧಿಕಾರಿ ಆಯ್ಕೆಯಾಗುವವರೆಗೂ ಅವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ.
ಕಳೆದ ಒಂದು ತಿಂಗಳಿನಿಂದ ಟ್ರುಡೊ ನೇತೃತ್ವದ ಲಿಬರಲ್ ಪಕ್ಷದ ಸರ್ಕಾರದಲ್ಲಿ ಆಂತರಿಕ ಕಲಹ ಉಂಟಾಗಿದೆ. ಟ್ರುಡೊ ನಾಯಕತ್ವದ ವಿರುದ್ದ ಅವರ ಪಕ್ಷದ ಸಂಸದರೇ ಅಪಸ್ವರ ಎತ್ತಿದ್ದಾರೆ. ಹಣಕಾಸು ಸಚಿವೆ ಕ್ರಿಸ್ಟಿನಾ ಫ್ರಿಲ್ಯಾಂಡ್ ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಖಲಿಸ್ತಾನ್ ಪ್ರತ್ಯೇಕವಾದಿಗಳ ವಿಚಾರದಲ್ಲೂ ಟ್ರುಡೊ ನಾಯಕತ್ವ ಮತ್ತು ಭಾರತದ ನಡುವೆ ಸಂಬಂಧ ಹಳಸಿದೆ. ಟ್ರುಡೊ ಸರ್ಕಾರ ಕೆನಡಾದಲ್ಲಿರುವ ಖಲಿಸ್ತಾನಿಗಳ ಪರ ಹೇಳಿಕೆ ನೀಡುತ್ತಿರುವುದನ್ನು ಭಾರತ ಖಂಡಿಸಿದೆ.