February 2, 2026

ಮೆಡಿಕಲ್ ಕಾಲೇಜಿನಲ್ಲಿ ಬೆಂಕಿ ಅವಘಡ: ಅಪಾಯದಿಂದ ಪಾರು

0
fire1_1200x768.jpeg

ಕೋಟ್ಟಯಂ: ಕೇರಳದ ಕೋಟ್ಟಯಂ ವೈದ್ಯಕೀಯ ಕಾಲೇಜಿನಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಕೋಟ್ಟಯಂ ಮೆಡಿಕಲ್ ಕಾಲೇಜಿನ ಹಿಂಭಾಗದಲ್ಲಿದ್ದ ತ್ಯಾಜ್ಯಗಳ ರಾಶಿಗೆ ಬೆಂಕಿ ತಗುಲಿದ್ದು, ಇದರಿಂದ ಸುತ್ತಲೂ ದಟ್ಟ ಹೊಗೆ ಆವರಿಸಿ, ಆಗಸದಲ್ಲೆಲ್ಲ ಬೆಂಕಿಯ ಉಂಡೆಗಳು ಏಳುತ್ತಿದ್ದವು. ಈ ಘಟನೆಯಿಂದ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೋಟ್ಟಯಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹಿಂಬದಿಯಲ್ಲಿದ್ದ ತ್ಯಾಜ್ಯದ ರಾಶಿಗೆ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಇದರಿಂದ ಮೆಡಿಕಲ್ ಕಾಲೇಜಿಗೆ ಬೆಂಕಿ ಆವರಿಸಿದ್ದು, ಕಾಲೇಜಿನಿಂದ ದೊಡ್ಡ ಪ್ರಮಾಣದ ಹೊಗೆ ಹೊರಬರುತ್ತಿದ್ದರೂ ಸಹ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆ ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

ಕಾಲೇಜಿನ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದ ಬ್ಯಾಗ್ ಸೇರಿದಂತೆ ಎಲ್ಲವೂ ಬೆಂಕಿಗೆ ಆಹುತಿಯಾಗಿದೆ. ಎರಡು ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ. ಇಂದು ಮಧ್ಯಾಹ್ನ 2.30ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಈ ಸ್ಥಳದಲ್ಲಿ ತ್ಯಾಜ್ಯವನ್ನು ಮತ್ತು ಪ್ಲಾಸ್ಟಿಕ್ ಕವರ್​ಗಳನ್ನು ಸಂಗ್ರಹಿಸಿಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!