ನಟಿ ಹನಿ ರೋಸ್ ವಿರುದ್ಧ ಅವಹೇಳನಾಕಾರಿ ಟೀಕೆ: ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರು ಪೊಲೀಸ್ ವಶಕ್ಕೆ
ತಿರುವನಂತಪುರಂ: ಮಲಯಾಳಂ ನಟಿ ಹನಿ ರೋಸ್ ವಿರುದ್ಧ ಅವಹೇಳನಾಕಾರಿ ಟೀಕೆ ಆರೋಪಕ್ಕೆ ಸಂಬಂಧಿಸಿ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರು ಅವರನ್ನು ಬುಧವಾರ ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿಯಾಗಿದೆ.
ವಯನಾಡಿನ ಮೆಪ್ಪಾಡಿಯಲ್ಲಿರುವ ಬೋಚೆ ರೆಸಾರ್ಟ್ ನಿಂದ ಬಾಬಿ ಚೆಮ್ಮನೂರು ಅವರನ್ನು ವಶಕ್ಕೆ ಪಡೆಯಲಾಗಿದೆ.
ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಬಾಬಿ ಚೆಮ್ಮನೂರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75(4) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್ 67ರಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.




