July 6, 2026

ದ.ಕ ಜಿಲ್ಲೆಯಲ್ಲಿ ಐದು ಮಂದಿಯಲ್ಲಿ
ಓಮಿಕ್ರಾನ್ ಪತ್ತೆ: ರಾಜ್ಯದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 13ಕ್ಕೇರಿಕೆ

0
virus

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐವರಿಗೆ ಓಮಿಕ್ರಾನ್ ಸೋಂಕು ದೃಡಪಟ್ಟಿದೆ.

ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಸೋಂಕು ಪತ್ತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಆತಂಕ ಹೆಚ್ಚಳವಾಗಿದೆ.

ಇದರಿಂದ ರಾಜ್ಯದಲ್ಲಿ ಒಟ್ಟಾರೆ ಒಮಿಕ್ರಾನ್ ಸೋಂಕಿತರ ಸಂಖ್ಯೆ 13ಕ್ಕೇರಿದೆ. ಬೆಂಗಳೂರು ನಂತರ ದಕ್ಷಿಣ ಕನ್ನಡ ಜಿಲ್ಲೆಗೆ ದಕ್ಷಿಣ ಆಫ್ರಿಕಾದ ತಳಿ ಹರಡಿದೆ.

ಇನ್ನುಖಾಸಗಿ ನರ್ಸಿಂಗ್ ಕಾಲೇಜನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯಿಂದ ಕಂಟೈನ್‌ಮೆಂಟ್ ಝೋನ್ ಎಂದು ಘೋಷಿಸಲಾಗಿದ್ದು, ಏಳು ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಎಲ್ಲಾ ಏಳು ವಿದ್ಯಾರ್ಥಿಗಳು ಕೇರಳದವರಾಗಿದ್ದು, ಕಾಲೇಜಿನಲ್ಲಿ ಪ್ರಥಮ ವರ್ಷ ಓದುತ್ತಿದ್ದಾರೆ. ಅವರು ಕೋವಿಡ್-19 ನೆಗೆಟಿವ್ ಆರ್‌ಟಿ-ಪಿಸಿಆರ್ ಪ್ರಮಾಣಪತ್ರಗಳೊಂದಿಗೆ ಆಗಮಿಸಿದ್ದರು. ಸೋಂಕಿತ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಲಾಗಿದೆ ಎಂದು ಕೋವಿಡ್ -19 ರ ದಕ್ಷಿಣ ಕನ್ನಡ ಜಿಲ್ಲಾ ನೋಡಲ್ ಅಧಿಕಾರಿ ಡಾ. ಹೆಚ್ ಅಶೋಕ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!