ಕೊಟ್ಟಿಗೆಹಾರ: ಕಾಡುಕೋಣ ದಾಳಿ ಕಾರ್ಮಿಕ ಸ್ಥಳದಲ್ಲೇ ಸಾವು

ಕೊಟ್ಟಿಗೆಹಾರ: ಕಾಡುಕೋಣ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿ ನಡೆದಿದೆ.
ಬುಧವಾರ(ಜ8) ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಅವರ ಶಾರದಾಂಬ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕರು ರಮೇಶ್ ಅವರ ತೋಟದಲ್ಲಿ ಕಾಫಿ ಕೊಯ್ಲು ಮಾಡುವುದರಲ್ಲಿ ನಿರತರಾಗಿದ್ದರು. ಸುಮಾರು 11 ಗಂಟೆ ಸಮಯದಲ್ಲಿ ಏಕಾಏಕಿ ಕಾಡುಕೋಣವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಅಸ್ಸಾಂ ಮೂಲದ ವಿವಾಹಿತ ಮಹಿಳಾ ಕಾರ್ಮಿಕರಾದ ಬಸೂರಿ ಬೀಬಿ (42 ವರ್ಷ) ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.