March 17, 2025

26ನೇ ವಿವಾಹ ವಾರ್ಷಿಕೋತ್ಸ ಸಂಭ್ರಮದಿಂದ ಆಚರಿಸಿದ್ದ ದಂಪತಿ ಬಳಿಕ ನೇಣು ಬಿಗಿದು ಆತ್ಮಹತ್ಯೆ

0

ಮುಂಬೈ: 26ನೇ ವಿವಾಹ ವಾರ್ಷಿಕೋತ್ಸವವನ್ನು ಸ್ನೇಹಿತರು, ಕುಟುಂಬದವರೊಂದಿಗೆ ಸಂಭ್ರಮದಿಂದ ಆಚರಿಸಿದ್ದ ದಂಪತಿ ಬಳಿಕ ನೇಣಿಗೆ ಶರಣಾದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಜೆರಿಲ್ ಡ್ಯಾಮ್ಸನ್ ಆಸ್ಕರ್ ಮಾನ್‌ಕ್ರಿಫ್ (57) ಹಾಗೂ ಪತ್ನಿ ಅನ್ನಿ (46) ಮಂಗಳವಾರ ರಾತ್ರಿ ಎಲ್ಲರೊಡಗೂಡಿ ತಮ್ಮ 26ನೇ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿದ್ದರು. ಬಳಿಕ ಇಬ್ಬರೂ ನೇಣಿಗೆ ಶರಣಾಗಿದ್ದಾರೆ.

ಮೊದಲು ಪತ್ನಿ ಣೇಣಿಗೆ ಶರಣಾಗಿದ್ದು, ಆಕೆಯ ಮೃತದೇಹಕ್ಕೆ ಮದುವೆಯಲ್ಲಿ ಧರಿಸಿದ್ದ ಬಟ್ಟೆಗಳನ್ನು ಹಾಕಿ ಪತಿ ಆಕೆಯನ್ನು ಅಲಂಕರಿಸಿದ್ದಾನೆ. ಕೊನೆಗೆ ತಾನೂ ಮದುವೆಗೆ ಧರಿಸಿದ್ದ ಬಟ್ಟೆಗಳನ್ನು ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ.

 

 

Leave a Reply

Your email address will not be published. Required fields are marked *

error: Content is protected !!