March 18, 2026

ಉಡುಪಿ: ಬೈಕ್ ಗೆ ಢಿಕ್ಕಿ ಹೊಡೆದ ಟ್ರಕ್: ಬೈಕ್ ಸವಾರ ಸಾವು, ಸುಟ್ಟು ಭಸ್ಮವಾದ ಟ್ರಕ್, ಬೈಕ್

0
image_editor_output_image-558649000-1736575780080.jpg

ಉಡುಪಿ: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ.

ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19) ಎಂದು ಗುರುತಿಸಲಾಗಿದೆ. ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಅವಿನಾಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!