March 18, 2026

ಮಂಜೇಶ್ವರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮೀಯಪದವಿನ ಯುವಕ ಮೃತ್ಯು

0
image_editor_output_image1300807908-1736578984158.jpg

ಮಂಜೇಶ್ವರ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.

ಮೀಯಪದವು ಬಳಿಯ ಬಾಳಿಯೂರು ಪರಂದರಗುರಿ ನಿವಾಸಿ ದಿ. ಪದ್ಮನಾಭ ಪೂಜಾರಿಯವರ ಸುಪುತ್ರ ಪೇಂಟಿಂಗ್ ಕಾರ್ಮಿಕ ಚೇತನ್ ಕುಮಾರ್ (24) ಮೃತಪಟ್ಟ ಯುವಕ.

ಡಿಸೆಂಬರ್ 31 ರಂದು ರಾತ್ರಿ ಮಂಗಳೂರಿನಲ್ಲಿ ನಡೆದ ಹೊಸ ವರ್ಷದ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ಮಧ್ಯೆ ಎದುರು ಭಾಗದಿಂದ ಬಂದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ತಲೆಗೆ ಹಾಗೂ ಮುಖಕ್ಕೆ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಳಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!