March 18, 2026

ಕುಂಬಳೆ: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತ್ಯು

0
salted-pistachio-500x500.png

ಕುಂಬಳೆ: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆ ಯಲ್ಲಿ ಶನಿವಾರ ಸಂಜೆ ನಡೆದಿದೆ.

ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಇವರು ಕುಂಬಳೆಯ ಭಾಸ್ಕರ ನಗರದ ನಿವಾಸಿಯಾಗಿದ್ದಾರೆ.

ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!