March 18, 2026

ಹಿಂಬದಿಯಿಂದ ಏಕಾಏಕಿ ಟ್ರಕ್ ಢಿಕ್ಕಿ: ಹುಟ್ಟುಹಬ್ಬದ ದಿನವೇ ಬಾಲಕ ಸಾವು

0
image_editor_output_image-712473021-1736745447564.jpg

ಬೆಂಗಳೂರು: ಹುಟ್ಟುಹಬ್ಬದ ದಿನವೇ ಬಾಲಕ ಅಪಘಾತಕ್ಕೆ ಬಲಿಯಾದ ಘಟನೆ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಭಾನು ತೇಜ(10) ಮೃತ ಬಾಲಕ. ಶನಿವಾರ ರಾತ್ರಿ ಅಣ್ಣನ ಜೊತೆ ಹೊರಮಾವುಗೆ ತೆರಳುತ್ತಿದ್ದಾಗ ಹೆಣ್ಣೂರು ಬಂಡೆಯ ಕ್ಲಾಸಿಕ್ ರಾಯಲ್ ಗಾರ್ಡನ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ.

ಹಿಂಬದಿಯಿಂದ ಏಕಾಏಕಿ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರಕ್‌ನ ಎರಡು ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಭಾನು ತೇಜ ಶಿರ ಛಿದ್ರಛಿದ್ರವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟ್ರಕ್‌ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!