February 1, 2026

ನಿಂತಿದ್ದ ಲಾರಿಗೆ ಕಾರು ಡಿಕ್ಕಿ:
ಇಬ್ಬರು ಮಕ್ಕಳು ಸೇರಿ ಆರು ಮಂದಿ ಮೃತ್ಯು

0
n3425091441639836553560b8b1380e55276f509208d725cc0cff372ff56e9776bc57515233539489113323.jpg

ತೆಲಂಗಾಣ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಜಿಲ್ಲೆಯ ಜಗನ್ನಾಥಪಲ್ಲಿ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಬನ್ಸ್ ವಾಡ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ನೋಂದಣಿಯ ಬೊಲೆರೋ ಕಾರು ನಾಂದೇಡ್ ನಿಂದ ಸಂಗರೆಡ್ಡಿ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅತಿ ವೇಗವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!