ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ: ನಾಲ್ವರು ಮಕ್ಕಳು ನೀರುಪಾಲು
ವಿಜಯಪುರ: ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸನ್ ನಿಂಗರಾಜ ಭಜಂತ್ರಿ ಹಾಗೂ ಹುಸೇನ್ ನಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳಿಯರು ಕಾಪಾಡಿದ್ದಾರೆ. ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.




