March 18, 2026

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ

0
image_editor_output_image937703583-1736827802868

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಂಬಡಗಟ್ಟಿಯ ಸಮೀಪ ಅಪಘಾತಕ್ಕೀಡಾಗಿದ್ದು.
ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರ್ ನಲ್ಲಿ ತೆರಳುತ್ತಿದ್ದಾಗ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಕಾರ್ ನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರ್ ಮುಂಭಾಗ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಬೆಳಗಿನ ಜಾವ 5 ಗಂಟೆಗೆ ಅಪಘಾತ ನಡೆದಿದೆ.

Leave a Reply

Your email address will not be published. Required fields are marked *

error: Content is protected !!