ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದು ಪತಿ ಆತ್ಮಹತ್ಯೆ

ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊದಲಿಗೆ ಗರಗ ಪೊಲೀಸರು ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು.
ಬಳಿಕ ಡೆತ್‌ನೋಟ್ ಶಿವರಾಜನೇ ಬರೆದಿದ್ದು ಎಂದು ಎಫ್‌ಎಸ್‌ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಪತ್ನಿಯೇ ಸಾವಿಗೆ ಕಾರಣ ಎಂದು ಗರಗ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.