ಕಾರು ಅಫಘಾತಕ್ಕೀಡಾಗಿ ಯುವ ಪತ್ರಕರ್ತ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಫಘಾತಕ್ಕೀಡಾಗಿ ಯುವ ಪತ್ರಕರ್ತ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ.
ಮೂಲತಃ ಗುಡಿಬಂಡೆ ನಿವಾಸಿ ಭರತ್ (32) ಮೃತ ದುರ್ದೈವಿ. ಬೆಂಗಳೂರಿನ ಹೊಸದಿಗಂತ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಭರತ್ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲೇ ವಾಸವಿದ್ದ ಭರತ್, ವಾರಾಂತ್ಯದ ಹಿನ್ನೆಲೆ ಸ್ವಗ್ರಾಮ ಗುಡಿಬಂಡೆಗೆ ಆಗಮಿಸಿದ್ದರು. ತಡರಾತ್ರಿ ಬಾಗೇಪಲ್ಲಿಗೆ ತೆರಳುವಾಗ ಅಪಘಾತ ಸಂಭವಿಸಿದೆ.