ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್‌ಗೆ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

ಮೂಡುಬಿದಿರೆ: ಸ್ಕೂಟರ್‌ಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಸ್ವರಾಜ್ಯ ಮೈದಾನದ ಪಕ್ಕದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಸಂಭವಿಸಿದೆ.
ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್‌ಗೆ ಎದುರಿನಿಂದ ವೇಗವಾಗಿ ಬಂದ ಕೇರಳ ಮೂಲದ ಕಾರು ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.