ಡ್ರಗ್ಸ್ ಕೇಸ್: ನಟಿ ರಾಗಿಣಿ ವಿರುದ್ಧದ ಪ್ರಕರಣವನ್ನು ಖುಲಾಸೆಗೊಳಿಸಿದ ಹೈಕೋರ್ಟ್
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ.
2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು. ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ಇಬ್ಬರೂ ನಟಿಯರು ಪರಪ್ಪನ ಅಗ್ರಹಾರದಲ್ಲಿ ಕೆಲವು ದಿನ ಕಳೆದಿದ್ದರು.




