ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೇಯಸಿಯ ಬಂಧನ
ಲಕ್ನೋ: 7ನೇ ಮಹಡಿಯಿಂದ ಬಿದ್ದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಆತನ ಮಾಜಿ ಪ್ರೇಯಸಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೃತನನ್ನು 23 ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿ ತಪಸ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಚರಣೆ – 8 ನಕಲಿ ಕ್ಲಿನಿಕ್ ಮೇಲೆ ದಾಳಿ
ಶನಿವಾರ ನೋಯ್ಡಾದ ಅಪಾರ್ಟ್ಮೆಂಟ್‌ನ ಏಳನೇ ಮಹಡಿಯಿಂದ ಬಿದ್ದು ತಪಸ್ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ತಪಸ್ ಕುಟುಂಬಸ್ಥರು ಆತನ ಮಾಜಿ ಪ್ರೇಯಸಿ ವಿರುದ್ಧ ಕಿರುಕುಳ ಆರೋಪದ ಮೇಲೆ ದೂರು ದಾಖಲಿಸಿದ್ದರು.
ದೂರಿನ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸದ್ಯ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದರಲ್ಲಿ ಯಾವುದೇ ರೀತಿಯ ಆತ್ಮಹತ್ಯೆ ಪ್ರಚೋದನೆ ನೀಡಲಾಗಿಲ್ಲ ಎಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.