ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ
ಮುಂಬೈ: ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ಮಧ್ಯರಾತ್ರಿ 2.30ರ ಸುಮಾರಿಗೆ ಘಟನೆ ನಡೆದಿದೆ.
ತೀವ್ರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮನೆಯಲ್ಲಿದ್ದವರು ಎಚ್ಚರಗೊಂಡ ನಂತರ ದರೋಡೆಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.




