March 18, 2026

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

0
image_editor_output_image-1419911942-1737014952902.jpg

ಬೆಳಗಾವಿ: ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ಆಗಿದೆ. ಮೂವರು ಸೇರಿಕೊಂಡು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರ ಎಸಗಿದ ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, “ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂ ಮೂಲಕ ಓರ್ವ ಬಾಲಕಿಗೆ ಪರಿಚಯವಾಗಿದ್ದಾನೆ. ಸವದತ್ತಿಗೆ ಹೋಗುತ್ತಿದ್ದೇನೆ ನೀನು ಬಾ ಎಂದು ಬಾಲಕಿಗೆ ಪುಸಲಾಯಿಸಿದ್ದಾನೆ. ಈತನ ಮಾತು ನಂಬಿ, ನೊಂದ ಬಾಲಕಿ ತನ್ನ ಸ್ನೇಹಿತೆಯನ್ನ ಕರೆದುಕೊಂಡು, ಇಬ್ಬರೂ ಒಟ್ಟಾಗಿ ಹಾರೂಗೇರಿ ಬಸ್ ನಿಲ್ದಾಣದಕ್ಕೆ ಹೋಗಿದ್ದಾರೆ” ಎಂದು ಹೇಳಿದರು.

“ಅಲ್ಲಿ, ಆರೋಪಿ ಅಭಿಷೇಕ ಸಂತ್ರಸ್ತ ಬಾಲಕಿಯರನ್ನು ಎರ್ಟಿಗಾ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಎರ್ಟಿಗಾ ಕಾರಿನಲ್ಲಿ ಮೂರೂ ಜನ ಆರೋಪಿಗಳಿದ್ದರು. ಸಂತ್ರಸ್ತ ಬಾಲಕಿಯರನ್ನು ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಜನವರಿ 3ರಂದು ಮಧ್ಯಾಹ್ನದ ವೇಳೆಗೆ ಗುಡ್ಡದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ” ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!