ಮಡಿಕೇರಿ: ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.
ಸಾವಿಗೀಡಾದ ವ್ಯಕ್ತಿಯನ್ನು ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂದು ಗುರುತಿಸಲಾಗಿದೆ. ಒಂಟಿ ನಳಿಗೆ ಬಂದೂಕಿನಿಂದ ಗುಂಡು ಹಾರಿ ಈ ದುರ್ಘಟನೆ ಸಂಭವಿಸಿದೆ. ಬಂದೂಕು ಕೆಳಕ್ಕೆ ಬಿದ್ದು ಗುಂಡು ಹಾರಿರುವ ಶಂಕೆ ವ್ಯಕ್ತವಾಗಿದೆ.