March 18, 2026

ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಪಲ್ಟಿ: ಓರ್ವ ಗಂಭೀರ, ಇಬ್ಬರಿಗೆ ಸಣ್ಣ-ಪುಟ್ಟ ಗಾಯ

0
image_editor_output_image-1512801122-1737093559123.jpg

ಬೆಳ್ಮಣ್: ಚಾಲಕನ ನಿಯಂತ್ರಣ ತಪ್ಪಿ ಲಕ್ಸುರಿ ಕಾರೊಂದು ಪಲ್ಟಿಯಾದ ಘಟನೆ ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ಇಂದು ಬೆಳಿಗ್ಗೆ ಸುಮಾರು ೩ ಗಂಟೆಗೆ ಸಂಭವಿಸಿದೆ.

ಕಾರು ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ.

ಕಟೀಲು ಪಾದಯಾತ್ರೆ ನಡೆಸುತ್ತಿರುವ ಭಕ್ತರು ಕೂಡಲೇ ಸಮಾಜಸೇವಕ ಕೆದಿಂಜೆ ಸುಪ್ರಿತ್ ಶೆಟ್ಟಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!