March 19, 2026

ಚಿಕ್ಕಮಗಳೂರು: ನ್ಯಾಯ ಕೇಳಿ ಬರುತ್ತಿದ್ದ ಮಹಿಳೆಯರ ಮಂಚಕ್ಕೆ ಕರೆದ PSI: ಕಳಸ ಪಿಎಸ್‌ಐ ನಿತ್ಯಾನಂದಗೌಡ ವಿರುದ್ಧ ಪತ್ನಿಯಿಂದಲೇ ಗಂಭೀರ ಆರೋಪ

0
image_editor_output_image1037990239-1737191701265.jpg

ಚಿಕ್ಕಮಗಳೂರು: ನನ್ನ ಪತಿ ಪೊಲೀಸ್ ಠಾಣೆಗೆ ನ್ಯಾಯ ಕೇಳಿ ಬರುತ್ತಿದ್ದ ಮಹಿಳೆಯರನ್ನು ಮಂಚಕ್ಕೆ ಕರೆದು ಸಿಕ್ಕಿಬಿದ್ದಿದ್ದಾರೆ. ಅಲ್ಲದೇ ನನಗೆ 50 ಲಕ್ಷ ರೂ. ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಾರೆ ಎಂದು ಕಳಸ ಪಿಎಸ್‌ಐ ನಿತ್ಯಾನಂದಗೌಡ ವಿರುದ್ಧ ಅವರ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ.

ನಿತ್ಯಾನಂದಗೌಡರ ತಂಗಿ, ತಂಗಿ ಗಂಡನಿಂದಲೂ ಹಲ್ಲೆ, ಅವಾಚ್ಯ ಶಬ್ಧಗಳ ಬಳಕೆ ಮಾಡಿ ನಿಂದಿಸುತ್ತಾರೆ. ಆತ ಕೆಲಸ ಮಾಡಿರುವ ಠಾಣೆಗಳಿಗೆ ಕಷ್ಟ ಎಂದು ಬರುವ ಹಾಗೂ ಪಾಸ್‌ಪೋರ್ಟ್‌ಗೆ ಬರುವ ಮಹಿಳೆಯರನ್ನ ಮಂಚಕ್ಕೆ ಕರೆಯುತ್ತಾರೆ. ಉಡುಪಿಯ ಕಾಪು ಠಾಣೆಯಲ್ಲಿದ್ದಾಗ ಮುಸ್ಲಿಂ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ನಾನು ಅವರ ರೂಂಗೆ ಹೋದಾಗ ಕಾಂಡೋಮ್‌ಗಳು ಪತ್ತೆಯಾಗಿದ್ದವು ಎಂದು ಅವರ ಪತ್ನಿ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!