ಇಂಡಿಯನ್ ಸ್ಟೇಟ್ ಹೇಳಿಕೆ: ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ FIR ದಾಖಲು
ಬಿಜೆಪಿ ಮತ್ತು ಭಾರತ ಸರ್ಕಾರದ (ಇಂಡಿಯನ್ ಸ್ಟೇಟ್) ವಿರುದ್ಧ ಹೋರಅಡುತ್ತಿದೆʼ ಎಂದು ಹೇಳಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಗುವಾಹಟಿಯ ಗಾಂಧಿ ಬಸ್ತಿ ಪದೇಶದ ನಿವಾಸಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ರಾಹುಲ್ ಗಾಂಧಿ ಅವರ ಹೇಳಿಕೆಯು ದೇಶದ ಭದ್ರತೆಗೆ ಮತ್ತು ಸಾರ್ವಜನಿಕ ವ್ಯವಸ್ಥೆಗೆ ಗಂಭೀರ ಬೆದರಿಕೆ ಒಡ್ಡುತ್ತದೆ ಎಂದು ಆರೋಪಿಸಲಾಗಿದೆ.




