ಜಾತಿ ನಿಂದನೆ: ಪಿಎಸ್‌ಐ ಗಂಗಮ್ಮ ಅಮಾನತು
ಕಲಬುರಗಿ: ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯದ ಕುರಿತು ಹಗುರವಾಗಿ ಮಾತನಾಡಿದ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಗಂಗಮ್ಮ ಅಮಾನತುಗೊಂಡಿದ್ದಾರೆ.
ಕಾಳಗಿ ತಾಲೂಕಿನ ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸೇರಿ ಗ್ರಾಮದ ಅಣಬಸಪ್ಪಗೌಡ ಪಾಟೀಲ್ ಹಾಗೂ ದೊಡ್ಡಪ್ಪಗೌಡ ಕುಟುಂಬದ ಮಧ್ಯೆ ಉಂಟಾಗಿರುವ ಜಮೀನು ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಲು ಯತ್ನಿಸುತ್ತಿದ್ದರು. ಈ ವೇಳೆ ಪಿಎಸ್‌ಐ ಗಂಗಮ್ಮ ಉಭಯ ಕುಟುಂಬದ ಸದಸ್ಯರನ್ನು ಉದ್ದೇಶಿಸಿ ಪರಿಶಿಷ್ಟ ಸಮುದಾಯವನ್ನು ನಿಂದಿಸುವ ಪದ ಬಳಸಿದ್ದಾರೆ. ಈ ಕುರಿತು ವಿಡಿಯೋ ತುಣುಕು ವೈರಲ್ ಆಗಿತ್ತು.




