March 20, 2026

ಬೀದರ್, ಮಂಗಳೂರಿನಲ್ಲಿ ನಡೆದ ದರೋಡೆ ಬೆನ್ನಲ್ಲೇ ಹಾಡಹಗಲೇ ಕಾರನ್ನು ಅಡ್ಡಗಟ್ಟಿ ದರೋಡೆ

0
image_editor_output_image-1361051378-1737360488065.jpg

ಮೈಸೂರು : ಕಳೆದ ಮೂರ್ನಾಲ್ಕು ದಿನಗಳಿಂದೀಚೆಗೆ ಬೀದರ್ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣಗಳು ಜನರ ಮನಸಲ್ಲಿ ಹಸಿರಾಗಿರುವಾಗಲೇ ಇದೀಗ ಮೈಸೂರಿನಲ್ಲೂ ಹಾಡಹಗಲೇ ದುಷ್ಕರ್ಮಿಗಳು ದರೋಡೆ ನಡೆಸಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ಭೀಕರ ದರೋಡೆ ನಡೆದಿದ್ದು, ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಮುಸುಕುದಾರಿಗಳು ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ, ಕದ್ದೊಯ್ದಿರುವ ಘಟನೆ ನಡೆದಿದೆ. ಕೇರಳ ಉದ್ಯಮಿ ಸೂಫಿ ಎಂಬುವವರ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಕಾರನ್ನು ಅಪಹರಿಸಿ ತೆಗೆದುಕೊಂಡು ಎಸ್ಕೇಪ್ ಆಗಿದ್ದಾರೆ. ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!