ಕೆಲಸಕ್ಕೆ ಬರಲ್ಲ ಎಂದಿದ್ದಕ್ಕೆ ಕಾರ್ಮಿಕರ ಮೇಲೆ ಮನಬಂದಂತೆ ಥಳಿತ
ವಿಜಯಪುರ: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಜಯಪುರದ ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ನಡೆದಿದೆ.
ಮಾಲೀಕ ಖೇಮು ರಾಠೋಡ ಹಾಗೂ ಸಂಬಂಧಿಕರು ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಮೇಲೆ ಹಲ್ಲೆ ನಡೆದಿದ್ದು ಕಾರ್ಮಿಕರು ಈಗ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.




