March 19, 2026

ಮೈಕ್ರೋ ಫೈನಾನ್ಸ್‌ಗಳ ಕಿರುಕುಳ: ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

0
image_editor_output_image1100363531-1737459581876.jpg

ರಾಮನಗರ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮುಂದುವರಿದಿದೆ. ಫೈನಾನ್ಸ್ ಕಾಟಕ್ಕೆ ಜನರು ಊರು ತೊರೆಯುತ್ತಿರುವುದು ಒಂದು ಕಡೆಯಾದರೇ ಮತ್ತೊಂದೆಡೆ ಜೀವವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದೆ. ಸಾಲಗಾರರ ಕಿರುಕುಳಕ್ಕೆ ಮಹಿಳೆಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಜನರು ಊರು ಖಾಲಿ ಮಾಡಿಕೊಂಡು ವಲಸೆ ಹೋಗುತ್ತಿದ್ದಾರೆ. ಮತ್ತೊಂದೆಡೆ ನಿತ್ಯ ಮನೆಬಳಿ ಬಂದು ಕಿರುಕುಳ ಕೊಡುತ್ತಿರುವ ಫೈನಾನ್ಸ್ ಸಿಬ್ಬಂದಿ ಕಾಟಕ್ಕೆ ಜೀವವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಮನಗರದ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಯಶೋದಮ್ಮ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!