March 19, 2026

ತವರು ಮನೆಗೆ ಹೋಗಿದ್ದಕ್ಕೆ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

0
image_editor_output_image-1583340185-1737522567300.jpg

ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.

ಪತಿಯ ಕ್ರೌರ್ಯದಿಂದ ಗಾಯಗೊಂಡ ಮಹಿಳೆಯನ್ನು ಮಧುರ ಎಂದು ಗುರುತಿಸಲಾಗಿದೆ. ಆಕೆಯ ಗಂಡ ಮಲ್ಲೇಶ್ ನಾಯ್ಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಹಿಳೆಗೆ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವಿನ ಹೋರಾಟ ಮಾಡುತ್ತಿದ್ದಾರೆ.

ಮಲ್ಲೇಶ್ ನಾಯ್ಕ್ ಮೂಲತಃ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲೂಕಿನ ಬಿಬಿ ತಾಂಡದವನು. ಕಳೆದ 8 ವರ್ಷಗಳ ಹಿಂದೆ ಅದೇ ಗ್ರಾಮದ ಮಧುರಳನ್ನ ವಿವಾಹವಾಗಿದ್ದ. ಸದ್ಯ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದಾನೆ.

Leave a Reply

Your email address will not be published. Required fields are marked *

error: Content is protected !!