March 19, 2026

ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ: ನಾಲ್ವರು ಸಾವು

0
image_editor_output_image2009974469-1737523657778.jpg

ರಾಯಚೂರು: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು, ಓರ್ವ ಚಾಲಕ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಮೃತ ದುರ್ದೈವಿಗಳು.

14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್‌ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್‌ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.

Leave a Reply

Your email address will not be published. Required fields are marked *

error: Content is protected !!