ಮಡಿಕೇರಿ: ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆ ಸಾವು
ಮಡಿಕೇರಿ: ಎರಡೇ ಮಕ್ಕಳು ಸಾಕು ಇನ್ಮುಂದೆ ಮಕ್ಕಳು ಮಾಡಿಕೊಳ್ಳೋದು ಬೇಡವೆಂದು ಲ್ಯಾಪ್ರೊಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯೊಬ್ಬರು ಆಪರೇಷನ್ ಥಿಯೆಟರ್‌ಗೆ ಹೋಗಿದ್ದ ವೇಳೆ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಶಾಂತಿ (27) ಮೃತಪಟ್ಟ ಬಾಣಂತಿ. ಮೂಲತಃ ಪಿರಿಯಾಪಟ್ಟಣ ತಾಲೂಕಿನ ಬೂದಿತಿಟ್ಟು ಗ್ರಾಮದ ಚೇಳಾದೋರೆ ಎಂಬುವವರ ಪತ್ನಿ ಶಾಂತಿ ಅವರು, ಮಂಗಳವಾರ ತಮ್ಮ ಗಂಡ ಹಾಗೂ 2 ತಿಂಗಳು 10 ದಿನದ ಮಗುವಿನೊಂದಿಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗಮಿಸಿದ್ದಾರೆ.
ಲ್ಯಾಪ್ರೊಸ್ಕೋಪಿ (ಉದರ ದರ್ಶಕ) ಎಂಬ ಶಸ್ತ್ರಚಿಕಿತ್ಸೆಯಾಗುತ್ತಿದ್ದ ಹಿನ್ನೆಲೆ ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿಸಲು ಮುಂದಾಗಿದ್ದಾರೆ. ಇದೇ ದಿನ ಸುಮಾರು 14 ಬಾಣಂತಿಯರು ಫ್ಯಾಮಿಲಿ ಪ್ಲ್ಯಾನಿಂಗ್‌ಗೆ ನೋಂದಣಿ ಮಾಡಿಕೊಂಡಿದ್ದಾರೆ.




