ಮುಜಫರ್‌ನಗರ ಕೋಮು ಗಲಭೆ ಪ್ರಕರಣ:
ಆರೋಪಿಯಾಗಿದ್ದ ಬಿಜೆಪಿ ಶಾಸಕನನ್ನು ಖುಲಾಸೆಗೊಳಿಸಿದ ಕೋರ್ಟ್
ಮುಜಾಫರ್‌ನಗರ: 2013 ರ ಮುಜಫರ್‌ನಗರ ಕೋಮು ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಖತೌಲಿ ಬಿಜೆಪಿ ಶಾಸಕ ವಿಕ್ರಂ ಸೈನಿ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶುಕ್ರವಾರ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.
ಗಲಭೆ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಗೋಪಾಲ್ ಉಪಾಧ್ಯಾಯ ಅವರು, ಶಾಸಕ ವಿಕ್ರಮ್ ಸೈನಿ ಮತ್ತು ಇತರ 11 ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.
ಪ್ರಾಸಿಕ್ಯೂಷನ್ ಆರೋಪಿಗಳ ವಿರುದ್ಧ ಗಲಭೆ ಮತ್ತು ಬೆಂಕಿ ಹಚ್ಚಿದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ ಎಂದು ಕೋರ್ಟ್ ಹೇಳಿದೆ.




