March 19, 2026

ಕಾರವಾರ: ನಿಂತಿದ್ದ ಫಾರ್ಚುನರ್ ಕಾರಿಗೆ ಹಿಂಭಾಗದಿಂದ ಡಾಂಬರ್ ಮಿಕ್ಸರ್ ಟ್ರಕ್ ಢಿಕ್ಕಿ: ಮಗು ಸೇರಿ 6 ಮಂದಿಗೆ ಗಂಭೀರ ಗಾಯ

0
image_editor_output_image-1484998622-1737622315807.jpg

ಕಾರವಾರ: ಟ್ರಾಫಿಕ್‍ನಲ್ಲಿ ನಿಂತಿದ್ದ ಫಾರ್ಚುನರ್ ಕಾರಿಗೆ ಹಿಂಭಾಗದಿಂದ ಡಾಂಬರ್ ಮಿಕ್ಸರ್ ಟ್ರಕ್ ಡಿಕ್ಕಿಯಾಗಿ ಮಗು ಸೇರಿ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕಾರು ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತಿತ್ತು. ಅರೆಬೈಲ್ ಘಟ್ಟದ ಬಳಿ ಟ್ರಾಫಿಕ್‍ನಲ್ಲಿ ಕಾರು ನಿಂತಿದ್ದ ವೇಳೆ ಹಿಂದಿನಿಂದ ಅತೀ ವೇಗವಾಗಿ ಬಂದ ಟ್ರಕ್ ಕಾರಿಗೆ ಡಿಕ್ಕಿಯಾಗಿದೆ.

Leave a Reply

Your email address will not be published. Required fields are marked *

error: Content is protected !!