March 18, 2026

ಮಗಳ ಹೊಟ್ಟೆಗೆ ಹೊಡೆದು ಹತ್ಯೆ: 8 ತಿಂಗಳ ಬಳಿಕ ಸಿಕ್ಕಿಬಿದ್ದ ತಾಯಿ

0
image_editor_output_image-1424705561-1737622428383.jpg

ಬೆಳಗಾವಿ: ಮಗಳ ಹೊಟ್ಟೆಗೆ ಹೊಡೆದು ಹತ್ಯೆ ಮಾಡಿದ್ದ ಮಲತಾಯಿಯನ್ನು 8 ತಿಂಗಳ ಬಳಿಕ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಪ್ನಾ ನಾವಿ ಎಂದು ಗುರುತಿಸಲಾಗಿದೆ. ಆರೋಪಿ, 4 ವರ್ಷದ ಮಗಳ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ತಾನೇನೂ ಮಾಡಿಲ್ಲ ಎಂಬಂತೆ ಇದ್ದಳು. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಕ್ರೌರ್ಯ ಬೆಳಕಿಗೆ ಬಂದಿದ್ದು, ಮಲತಾಯಿಯ ಅಸಲಿ ಬಣ್ಣ ಬಯಲಾಗಿದೆ.

2024ರ ಮೇ ತಿಂಗಳಲ್ಲಿ ಸಮೃದ್ಧಿ ರಾಯಣ್ಣ ನಾವಿ (4) ಸಾವನ್ನಪ್ಪಿದ್ದಳು. ಮಗುವಿನ ಅಜ್ಜ ಹಾಗೂ ಅಜ್ಜಿ ಸಪ್ನಾ ನಾವಿ ವಿರುದ್ಧ ಕೊಲೆ ಆರೋಪ ಮಾಡಿದ್ದರು. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಬಳಿಕ ಮೃತಪಟ್ಟ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಇದಾದ ಬೆನ್ನಲ್ಲೇ ಸಪ್ನಾ ನಾವಿ ನಿರೀಕ್ಷಣಾ ಜಾಮೀನು ಪಡೆದಿದ್ದಳು.

Leave a Reply

Your email address will not be published. Required fields are marked *

error: Content is protected !!